TSK

TSK · 2 ಸಮುವೇಲನು 19:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.

ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ

ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.