ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
TSK
TSK · 2 ಸಮುವೇಲನು 19:39
Treasury of Scripture Knowledge references in ಕನ್ನಡ IRV.
ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.
ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.
ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.