¶ ಅಬ್ರಾಮನು, ಸೊದೋಮಿನ ಅರಸನಿಗೆ,
TSK
TSK · 2 ಸಮುವೇಲನು 2:5
Treasury of Scripture Knowledge references in ಕನ್ನಡ IRV.
ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.
ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.
ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.