TSK

TSK · 2 ಸಮುವೇಲನು 2:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.

ಅಹೀಮಾಚನ ಮಗಳಾದ ಅಹೀನೋವಮಳು ಸೌಲನ ಹೆಂಡತಿ. ನೇರನ ಮಗನಾದ ಅಬ್ನೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು.

“ಅಬ್ನೇರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.

ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.

¶ ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.

ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.

ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.