TSK

TSK · 2 ಸಮುವೇಲನು 20:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.

ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

¶ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.

¶ ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,

ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!

¶ ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.