TSK

TSK · 2 ಸಮುವೇಲನು 21:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

¶ ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.

ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.

¶ ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.

ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ

ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.

ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.

ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು.

ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.

¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,

¶ ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.

ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ: