TSK

TSK · 2 ಸಮುವೇಲನು 21:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.

ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.