TSK

TSK · 2 ಸಮುವೇಲನು 21:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.

¶ ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.

ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.

“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.

ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.

ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.

ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

¶ ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,

ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.

ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.