TSK

TSK · 2 ಸಮುವೇಲನು 22:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

¶ ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.

ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.

ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.

ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.

ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.