TSK

TSK · 2 ಸಮುವೇಲನು 22:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.

ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›