ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.
TSK
TSK · 2 ಸಮುವೇಲನು 22:40
Treasury of Scripture Knowledge references in ಕನ್ನಡ IRV.
1 ಸಮುವೇಲನು 23:5
TSK
ಕೀರ್ತನೆಗಳು 18:39
TSK
ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
ಕೀರ್ತನೆಗಳು 144:2
TSK
ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
ಯೆಶಾಯ 60:14
TSK
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
ಪ್ರಕಟನೆ 5:9
TSK
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.