ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.
TSK
TSK · 2 ಸಮುವೇಲನು 22:43
Treasury of Scripture Knowledge references in ಕನ್ನಡ IRV.
ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
¶ ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.