TSK

TSK · 2 ಸಮುವೇಲನು 24:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.

¶ ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.

ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.

ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.