TSK

TSK · 2 ಸಮುವೇಲನು 7:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.

¶ ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.

ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.

ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.

ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,

ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.