TSK

TSK · 2 ಸಮುವೇಲನು 7:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.

ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.

ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.

ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.

ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.

ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,

¶ “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.

ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.