ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · 2 ಸಮುವೇಲನು 7:16
Treasury of Scripture Knowledge references in ಕನ್ನಡ IRV.
ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.
ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.
ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.
ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ.
ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.