TSK

TSK · 2 ಸಮುವೇಲನು 7:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

¶ ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.

ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.

ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.

ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?

ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

¶ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.