TSK

TSK · 2 ಸಮುವೇಲನು 7:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

¶ ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.

ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.

ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.

ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.