TSK

TSK · 2 ಸಮುವೇಲನು 8:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.

¶ ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.