¶ ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.
TSK
TSK · 2 ಸಮುವೇಲನು 9:1
Treasury of Scripture Knowledge references in ಕನ್ನಡ IRV.
ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.
ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,
ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, ‹“ಸ್ತ್ರೀಯೇ, ಇಗೋ, ನಿನ್ನ ಮಗನು”› ಎಂದು ಹೇಳಿದನು.
¶ ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.