¶ ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
TSK
TSK · 2 ಸಮುವೇಲನು 9:7
Treasury of Scripture Knowledge references in ಕನ್ನಡ IRV.
ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.
ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.
ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
¶ ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
¶ ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,