¶ ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
TSK
TSK · 2 ತಿಮೊಥೆಯನಿಗೆ 1:6
Treasury of Scripture Knowledge references in ಕನ್ನಡ IRV.
‹ಅವನು ಒಬ್ಬನಿಗೆ ಐದು›‹ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.›
‹ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.›
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
ಪವಿತ್ರಾತ್ಮನನ್ನು ನಂದಿಸಬೇಡಿ,
ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
¶ ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.