ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
TSK
TSK · 2 ತಿಮೊಥೆಯನಿಗೆ 2:19
Treasury of Scripture Knowledge references in ಕನ್ನಡ IRV.
ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.
¶ ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.
‹ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.›
‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›
‹ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
‹ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.›
‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›
ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
‹ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.›‹ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.›
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.