ಎಜ್ರನು 1:6
TSK
ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
TSK
Treasury of Scripture Knowledge references in ಕನ್ನಡ IRV.
ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
¶ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
¶ ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.