TSK

TSK · 2 ತಿಮೊಥೆಯನಿಗೆ 2:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,

ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.

¶ ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.

ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

¶ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.