TSK

TSK · 2 ತಿಮೊಥೆಯನಿಗೆ 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.

¶ ಯೇಸು ಮತ್ತೊಬ್ಬನಿಗೆ, ‹“ನನ್ನನ್ನು ಹಿಂಬಾಲಿಸು”› ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.

ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.

ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.