TSK

TSK · 2 ತಿಮೊಥೆಯನಿಗೆ 3:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.

ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.

¶ ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,

ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,

ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.

ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

¶ ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

¶ ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.

“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›