TSK

TSK · 2 ತಿಮೊಥೆಯನಿಗೆ 4:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.

ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.

¶ ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.

¶ ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.