TSK

TSK · 2 ತಿಮೊಥೆಯನಿಗೆ 4:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

¶ “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.

‹ಅದು›‹ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ”› ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

‹ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.

ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.

¶ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

¶ ‹“ಎಚ್ಚರವಾಗು, ಸಾಯುವ ಹಾಗಿರುವ›‹ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.›