TSK

TSK · 2 ತಿಮೊಥೆಯನಿಗೆ 4:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,

‹ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.›

ಯೇಸು ಅವರಿಗೆ ‹“ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.›

ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.

¶ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.

¶ ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.

¶ ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.

¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

‹ಸೈರಣೆಯಿಂದಿರಬೇಕೆಂಬ›‹ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,›‹ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.›