TSK

TSK · 3 ಯೋಹಾನನು 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.

ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,

ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.

ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.