‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›
TSK
TSK · ಅಪೊಸ್ತಲರ ಕೃತ್ಯಗ 1:11
Treasury of Scripture Knowledge references in ಕನ್ನಡ IRV.
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.
ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.