TSK

TSK · ಅಪೊಸ್ತಲರ ಕೃತ್ಯಗ 1:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.

¶ ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,

ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.

¶ ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.

ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.

ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.

ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.

ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.

ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.

ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ ‹“ಸಮಾಧಾನವಾಗಲಿ ಎಂದನು”›

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

¶ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.

¶ ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

¶ ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.

ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;

ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

¶ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,