ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
TSK
TSK · ಅಪೊಸ್ತಲರ ಕೃತ್ಯಗ 1:15
Treasury of Scripture Knowledge references in ಕನ್ನಡ IRV.
¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.›
¶ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;›‹ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.›
ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. ‹“ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?”› ಎಂದು ಮಾತ್ರ ಹೇಳಿದನು.
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.