ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
TSK
TSK · ಅಪೊಸ್ತಲರ ಕೃತ್ಯಗ 10:11
Treasury of Scripture Knowledge references in ಕನ್ನಡ IRV.
‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
¶ ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
¶ ‹“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.›
ಯೇಸು ‹“ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.›‹ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ›‹ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ”› ಎಂದು ಹೇಳಿದನು.
‹ಆದರೆ›‹ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು”› ಎಂದು ಹೇಳಿದನು.
¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.