ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 10:35
Treasury of Scripture Knowledge references in ಕನ್ನಡ IRV.
ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
¶ ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.