TSK

TSK · ಅಪೊಸ್ತಲರ ಕೃತ್ಯಗ 10:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,

ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.

ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

¶ ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

‹ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?›

¶ ಆತನು ಅವರಿಗೆ, ‹“ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ”› ಎಂದು ಹೇಳಿದನು.

ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.

ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,

ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.

ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.

¶ ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.

ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.

ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›

¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.

ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.