TSK

TSK · ಅಪೊಸ್ತಲರ ಕೃತ್ಯಗ 11:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.

¶ ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.

ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು

ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.

ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.