ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
TSK
TSK · ಅಪೊಸ್ತಲರ ಕೃತ್ಯಗ 11:30
Treasury of Scripture Knowledge references in ಕನ್ನಡ IRV.
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.
ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದನಲ್ಲದೆ ಅತ್ಯಾಸಕ್ತನಾಗಿದ್ದು, ತನ್ನ ಸ್ವಚಿತ್ತದಿಂದ ನಿಮ್ಮ ಬಳಿಗೆ ಬಂದನು.
ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
¶ ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;