TSK

TSK · ಅಪೊಸ್ತಲರ ಕೃತ್ಯಗ 13:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.

¶ ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.

ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.

ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,

ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.

¶ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

¶ ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?