ಮಾರ್ಕನು 15:45
TSK
¶ ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.
TSK
Treasury of Scripture Knowledge references in ಕನ್ನಡ IRV.
¶ ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.
ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.
¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.
ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.