TSK

TSK · ಅಪೊಸ್ತಲರ ಕೃತ್ಯಗ 13:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.

ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.

‹ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.›

ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.

ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

¶ ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.

¶ ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

¶ ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.