¶ ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.
TSK
TSK · ಅಪೊಸ್ತಲರ ಕೃತ್ಯಗ 13:6
Treasury of Scripture Knowledge references in ಕನ್ನಡ IRV.
¶ ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,
‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
¶ “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;
¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›
‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.
ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.