TSK

TSK · ಅಪೊಸ್ತಲರ ಕೃತ್ಯಗ 14:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;

‹ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.›

ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.

ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.