TSK

TSK · ಅಪೊಸ್ತಲರ ಕೃತ್ಯಗ 14:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.

ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

¶ ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.

¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.