TSK

TSK · ಅಪೊಸ್ತಲರ ಕೃತ್ಯಗ 15:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.

¶ ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.

‹ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.›

¶ ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.

ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.

ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,

ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.

¶ ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.

ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.