ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
TSK
TSK · ಅಪೊಸ್ತಲರ ಕೃತ್ಯಗ 16:12
Treasury of Scripture Knowledge references in ಕನ್ನಡ IRV.
ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.