TSK

TSK · ಅಪೊಸ್ತಲರ ಕೃತ್ಯಗ 16:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.

¶ ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,

ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.

¶ ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,

¶ ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.