TSK

TSK · ಅಪೊಸ್ತಲರ ಕೃತ್ಯಗ 16:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.

ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.

¶ ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.

‹ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.›

‹ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.›

¶ ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.

ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?

¶ ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.

¶ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,

ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.

¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.

¶ ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.