TSK

TSK · ಅಪೊಸ್ತಲರ ಕೃತ್ಯಗ 17:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.

ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.

ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.

¶ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.